ಶಿರಸಿ: "ಅನೇಕ’’ ಸಾಂಸ್ಕೃತಿಕ ವೇದಿಕೆ ಶಿರಸಿ ಇವರು ನಡೆಸಿದ “ಸಂವಿಧಾನದ ಆಶಯ ಮತ್ತು ಬಹುತ್ವ ಭಾರತ’ ಕುರಿತಾದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಡಾ.ಭಾಸ್ಕರ ಸ್ವಾದಿ ಮೆಮೋರಿಯಲ್ ಲಯನ್ಸ್ ಪಿ.ಯು. ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಕು. ಸೌಖ್ಯಾ ವಿನಾಯಕ ಹೆಗಡೆ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾಳೆ. ವಿದ್ಯಾರ್ಥಿಯ ಈ ಸಾಧನೆಗೆ ಸಹಕರಿಸಿದ ಶಿಕ್ಷಕರಿಗೆ ಹಾಗೂ ಪಾಲಕರಿಗೆ ಶಿರಸಿ ಲಯನ್ಸ ಎಜುಕೇಷನ್ ಸೊಸೈಟಿ ಆಡಳಿತ ಮಂಡಳಿ, ಕಾಲೇಜು ಸಮೂಹದ ಪ್ರಾಚಾರ್ಯರು ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದ, ಮತ್ತು ಪಾಲಕರ ವೃಂದ ಆಶೀರ್ವಾದಪೂರ್ವಕವಾಗಿ ಅಭಿನಂದಿಸಿದ್ದಾರೆ.
0 Comments